
ಪ್ರಜಾವಾಣಿ ವಾರ್ತೆ
ರಾಮದುರ್ಗ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅವರಾದಿಯ ಹತ್ತಿರ ಮಲಪ್ರಭಾ ನದಿಯಲ್ಲಿ ಮುಳುಗುತ್ತಿದ್ದ 14 ವರ್ಷದ ಬಾಲಕನನ್ನು ರಕ್ಷಿಸಲು ಹೋದ ವ್ಯಕ್ತಿಯೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಶ್ರೀಶೈಲ ಈರಪ್ಪ ಮುದಕನ್ನವರ(45) ಮೃತರು. ‘ಬಾಲಕ ವಿಜಯ ಹೊಳೆನ್ನವರ ನದಿಯಲ್ಲಿ ಮುಳುಗುತ್ತಿರುವುದನ್ನು ಕಂಡ ಶ್ರೀಶೈಲ ರಕ್ಷಣೆಗೆ ಧಾವಿಸಿದರು. ಬಾಲಕನನ್ನು ರಕ್ಷಿಸಿದ ಬಳಿಕ, ತಾವೇ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಸುರೇಬಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.