ಬೆಳಗಾವಿ: ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಕುಟುಂಬ ಸದಸ್ಯರ ಜೊತೆಗೆ ಮರಳುತ್ತಿದ್ದ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಕಿರಣ ನಿಪ್ಪಾಣಿಕರ (47) ಅವರು ಗುರುವಾರ ವಾರಾಣಸಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
‘ಕಿರಣ ಅವರಿಗೆ ಹೃದಯಾಘಾವಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಶುಕ್ರವಾರ (ಫೆ.28) ಅವರ ಮೃತದೇಹವನ್ನು ಬೆಳಗಾವಿಗೆ ತರಲಾಗುವುದು’ ಎಂದು ಆಪ್ತರು ತಿಳಿಸಿದ್ದಾರೆ. ‘ಫ್ಯಾಸ್ ಫೌಂಡೇಶನ್’ ಸಂಘಟನೆ ಮೂಲಕ ಅವರು ಸಮಾಜಸೇವೆಯಲ್ಲಿ ತೊಡಗಿದ್ದರು. ಅವರ ಸಹೋದರಿ ಲಕ್ಷ್ಮೀ ನಿಪ್ಪಾಣಿಕರ ಅವರು ಮಹಾನಗರ ಪಾಲಿಕೆ ಉಪ ಆಯುಕ್ತರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.