ADVERTISEMENT

ಕೃಷ್ಣಾ ನದಿಯಲ್ಲಿ ವ್ಯಕ್ತಿ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 10:24 IST
Last Updated 3 ಆಗಸ್ಟ್ 2024, 10:24 IST

ಬೆಳಗಾವಿ: ತಾಲ್ಲೂಕಿನ ಬಾವನ ಸವದತ್ತಿ ಗ್ರಾಮದ ಬಾಬುರಾವ್‌ ಸಂಜೀವ ಬಾಪಕರ (40) ಎಂಬ ವ್ಯಕ್ತಿ ಶವ, ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಶನಿವಾರ ಪತ್ತೆಯಾಗಿದೆ.

ಬಾಬುರಾವ್‌ ಅವರು ಕಾಗವಾಡ ಸಕ್ಕರೆ ಕಾರ್ಖಾನೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಗುರುವಾರ ಬೆಳಿಗ್ಗೆ ಮನೆಯಿಂದ ಹೋದವರು ಮತ್ತೆ ಬಂದಿರಲಿಲ್ಲ. ಅಂಕಲಿ ಸೇತುವೆ ಬಳಿ ಅವರ ಶವ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಅಂಕಲಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT