
ಮೂಡಲಗಿ: ‘ತಾಲ್ಲೂಕಿನ ಮಸಗುಪ್ಪಿಯ ನಮ್ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಡಿ.26 ಮತ್ತು 27ರಂದು ಮಹಾಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಭುಜನ್ನವರ ಹೇಳಿದರು.
ಸೋಮವಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಡಿ.26ರಂದು ಬೆಳಿಗ್ಗೆ 10.30ಕ್ಕೆ ಜರುಗುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಹೊಸದುರ್ಗದ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿ, ಮುರಗೋಡದ ಪ್ರಭು ನೀಲಕಂಠ ಸ್ವಾಮೀಜಿ ವಹಿಸುವರು’ ಎಂದರು.
‘ಕಾರ್ಯಕ್ರಮವನ್ನು ಸಚಿವ ಸತೀಶ ಜಾರಕಿಹೊಳಿ, ನವೀಕೃತ ಶಾಲಾ ಕಟ್ಟಡವನ್ನು ಶಾಸಕ ಬಾಲಚಂದ್ರ ಜಾರಕಹೊಳಿ ಹಾಗೂ ವಿಜ್ಞಾನ ಪ್ರಯೋಗಾಲಯವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರಕಾಶ ಹುಕ್ಕೇರಿ, ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯಕ್ಷ ಭರಮಣ್ಣ ಉಪ್ಪಾರ, ಸರ್ವೋತ್ತಮ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ, ಧಾರವಾಡ ಶಿಕ್ಷಣ ಇಲಾಖೆ ಅಪರ ಆಯುಕ್ತ ಈಶ್ವರ ಉಳ್ಳಾಗಡ್ಡಿ ಭಾಗವಹಿಸುವರು. ಶಾಲೆಯ ಭೂದಾನಿಗಳಾದ ಕಲ್ಲಪ್ಪ ಮಳಲಿ ಅವರನ್ನು ಸತ್ಕರಿಸಲಾಗುವುದು. ಅತಿಥಿ ಉಪನ್ಯಾಸಕರಾಗಿ ಹಾರೂಗೇರಿ ಸಾಹಿತಿ ವಿ.ಎಸ್. ಮಾಳಿ ಪಾಲ್ಗೊಳ್ಳುವರು’ ಎಂದು ತಿಳಿಸಿದರು.
‘ಡಿ.27ರಂದು ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಗೋಕಾಕದ ಮುರುಘರಾಜೇಂದ್ರ ಸ್ವಾಮೀಜಿ, ಹಂದಿಗುಂದದ ಶಿವಾನಂದ ಸ್ವಾಮೀಜಿ, ಘಟಪ್ರಭಾದ ಮಲ್ಲಿಕಾರ್ಜುನ ಸ್ವಾಮೀಜಿ ವಹಿಸುವರು. ಸಂಸದ ಜಗದೀಶ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಉದ್ಘಾಟಕರಾಗಿ ಭಾಗವಹಿಸುವರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಬಾಳಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ರೈತ ಮಹಿಳೆ ಕವಿತಾ ಮಿಶ್ರಾ ಅತಿಥಿ ಉಪನ್ಯಾಸಕರಾಗಿ ಭಾಗವಹಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಚನ್ನರಾಜ ಹಟ್ಟಿಹೊಳಿ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ, ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಬಿ.ಎಸ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಸುಭಾಷ ಪಾಟೀಲ ಪಾಲ್ಗೊಳ್ಳುವರು’ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಬಾಳನಗೌಡ ಪಾಟೀಲ, ಪ್ರಕಾಶ ಗೊಂದಿ, ನಿಂಗಪ್ಪ ಯಕ್ಕುಂಡಿ, ಸಂಜು ಹೊಸಕೋಟಿ, ಬಸವರಾಜ ಗಾಡವಿ, ಬಾಳಪ್ಪ ಗಂಗನ್ನವರ, ಮುಖ್ಯ ಶಿಕ್ಷಕ ಶಂಕರ ಗಾಡವಿ, ನಬಿಸಾಬ ನದಾಫ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.