ADVERTISEMENT

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ ಶಾಸಕ: ಬಿಇಒ ಜಿ.ಬಿ. ಬಳಗಾರ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 16:07 IST
Last Updated 10 ಜುಲೈ 2021, 16:07 IST
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ವಿತರಿಸಲೆಂದು ಗೋಕಾಕದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ನೀಡಿದ ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ ಶನಿವಾರ ಸ್ವೀಕರಿಸಿದರು
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ವಿತರಿಸಲೆಂದು ಗೋಕಾಕದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ನೀಡಿದ ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ ಶನಿವಾರ ಸ್ವೀಕರಿಸಿದರು   

ಗೋಕಾಕ (ಬೆಳಗಾವಿ ಜಿಲ್ಲೆ): ‘ಶಾಸಕ ರಮೇಶ ಜಾರಕಿಹೊಳಿ ಅವರು ಪತ್ರಗಳನ್ನು ಬರೆದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಲ್ಲದೆ, ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ಗಳನ್ನು ಕೂಡ ವಿತರಿಸಿ ಸಹಕರಿಸಿದ್ದಾರೆ’ ಎಂದು ಬಿಇಒ ಜಿ.ಬಿ. ಬಳಗಾರ ಹೇಳಿದರು.

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ವಿತರಿಸಲೆಂದು ಇಲ್ಲಿನ ತಮ್ಮ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ನೀಡಿದ ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ಗಳನ್ನು ಶನಿವಾರ ಸ್ವೀಕರಿಸಿ ಅವರು ಮಾತನಾಡಿದರು.

‘ಶೈಕ್ಷಣಿಕ ವಲಯಕ್ಕೆ ಶಾಸಕರ ಕೊಡುಗೆ ಅಪಾರವಾಗಿದೆ. ಹೊಸದಾಗಿ ಆರು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಮಂಜೂರು ಮಾಡಿಸಿ ಬಡ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ’ ಎಂದರು.

ADVERTISEMENT

ಮುಖಂಡರಾದ ತುಕಾರಾಮ ಕಾಗಲ ಮತ್ತು ಮಡ್ಡೆಪ್ಪ ತೋಳಿನವರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ, ಸುರೇಶ ಸನದಿ, ಕಾಂತು ಎತ್ತಿನಮನಿ, ಜೆ.ಆರ್. ಮಾಳಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.