ಬೆಳಗಾವಿ: ಇಲ್ಲಿನ ಬಿಮ್ಸ್ ಆವರಣದಲ್ಲಿನ ಹಾಸ್ಟೆಲ್‌ನಲ್ಲಿ ಮಂಗಳೂರು ಮೂಲದ ಡಾ.ಪ್ರಿಯಾ (27) ಎಂಬ ವೈದ್ಯಕೀಯ ವಿದ್ಯಾರ್ಥಿನಿ ಸೋಮವಾರ ರಾತ್ರಿ ಔಷಧಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ವಿವಿಧ ಬಗೆಯ ಔಷಧಗಳನ್ನು ಸೇವಿಸಿ ಸಾವು ಸಂಭವಿಸಿರಬಹುದು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಿಖರ ಕಾರಣ ಗೊತ್ತಾಗಲಿದೆ’ ಎಂದು ಬಿಮ್ಸ್ ನಿರ್ದೇಶಕ ಡಾ.ಅಶೋಕ ಶೆಟ್ಟಿ ತಿಳಿಸಿದ್ದಾರೆ.
‘ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.