ADVERTISEMENT

ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ: ಸಿಪಿಐ ರವೀಂದ್ರ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 4:27 IST
Last Updated 27 ಫೆಬ್ರುವರಿ 2024, 4:27 IST
ಅಥಣಿ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಸಿಪಿಐ ರವೀಂದ್ರ ನಾಯ್ಕೋಡಿ ಮಾತನಾಡಿದರು
ಅಥಣಿ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಸಿಪಿಐ ರವೀಂದ್ರ ನಾಯ್ಕೋಡಿ ಮಾತನಾಡಿದರು   

ಅಥಣಿ: ‘ಪೊಲೀಸ್ ಇಲಾಖೆಯಿಂದ ನಿರಂತರವಾಗಿ ಜಾಗೃತಿ ಮೂಡಿಸಿದರೂ, ಹಲವು ಚಾಲಕರು ಮತ್ತು ಸವಾರರು ಸಂಚಾರ ನಿಯಮ ಪಾಲಿಸದ್ದರಿಂದ ಅಪಘಾತ ಹೆಚ್ಚುತ್ತಿವೆ. ಮುಂದಿನ ದಿನಗಳಲ್ಲಿ ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಪಿಐ ರವೀಂದ್ರ ನಾಯ್ಕೋಡಿ ಎಚ್ಚರಿಕೆ ನೀಡಿದರು.

ಇಲ್ಲಿನ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ನಡೆದ ಆಟೋರಿಕ್ಷಾ ಹಾಗೂ ಖಾಸಗಿ ವಾಹನಗಳ ಚಾಲಕರ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದೊಂದು ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಅಪಘಾತಗಳಲ್ಲಿ 25ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇಂಥ ಪ್ರಕರಣಗಳಲ್ಲಿ ಪರವಾನಗಿ ಹೊಂದಿರದ ಚಾಲಕರೇ ಹೆಚ್ಚಿರುವುದು ಕಂಡುಬಂದಿದೆ. ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು’ ಎಂದು ತಿಳಿಸಿದರು.

‘ಅಥಣಿಯ ಪ್ರಮುಖ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸಬಾರದು. ವ್ಯವಸ್ಥಿತವಾಗಿ ಪಾರ್ಕಿಂಗ್ ಮಾಡದ ವಾಹನಗಳ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ಪಿಎಸ್‌ಐ ಶಿವಾನಂದ ಕಾರಜೋಳ, ಹೆಚ್ಚುವರಿ ಎಸ್ಐ ಎಸ್.ಸಾಗನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.