ಬೆಳಗಾವಿ: ‘ಅಕಾಲಿಕ ಮಳೆಯಿಂದಾಗಿ ಹಾನಿಗೆ ಒಳಗಾದ ಬೆಳೆಗಳಿಗೆ ಎಕರೆಗೆ ₹ 50ಸಾವಿರದಂತೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮುಖಂಡ ಮನೋಹರ ಕಿಣೇಕರ ಮಾತನಾಡಿ, ‘ಅಕಾಲಿಕ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಭತ್ತದ ಬೆಳೆಗೆ ಬಹಳಷ್ಟು ಹಾನಿಯಾಗಿದೆ. ಇದರಿಂದ ಕೈಗೆ ಬಂದ ಬೆಳೆ ಬಾಯಿಗೆ ಬಾರದಂತಾದ ಸ್ಥಿತಿಯಲ್ಲಿ ರೈತರಿದ್ದಾರೆ. ಅಪಾರ ನಷ್ಟ ಅನುಭವಿಸಿದ್ದಾರೆ. ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸಮರ್ಪಕವಾಗಿ ಸಮೀಕ್ಷೆ ನಡೆಸಬೇಕು. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ದೀಪಕ ದಳವಿ, ಶಿವಾಜಿ ಸುಂಟಕರ, ಪ್ರಕಾಶ ಮರಗಾಳೆ, ಮನೋಜ್ ಪಾವಶೆ, ಶುಭಂ ಶೆಳಕೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.