ದೀಪಕ ಗುಡಗನಟ್ಟಿ
ಬೆಳಗಾವಿ: ‘ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮುಖಂಡ ಶುಭಂ ಶೆಳಕೆ ಬೆಳಗಾವಿಯ ಭಯೋತ್ಪಾದಕ. ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಅವರು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಕಿಡಿ ಕಾರಿದ್ದಾರೆ.
ಮಂಗಳವಾರ ವಿಡಿಯೊ ಹೇಳಿಕೆ ಬಿಡುಗಡೆಗೊಳಿಸಿದ ಅವರು, ‘ಗಡಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಅನ್ಯೋನ್ಯವಾಗಿ ಬದುಕುತ್ತಿದ್ದಾರೆ. ಆದರೆ, ಶುಭಂ ಶೆಳಕೆ ಅವರು ಭಾಷಾ ಸಾಮರಸ್ಯ ಕದಡಲು ಯತ್ನಿಸುತ್ತಿದ್ದಾರೆ. ನಮ್ಮ ಹೋರಾಟವೇನಿದ್ದರೂ ಎಂಇಎಸ್ ವಿರುದ್ಧವೇ ಹೊರತು, ಬೆಳಗಾವಿಯಲ್ಲಿನ ಮರಾಠಿ ಭಾಷಿಕರ ವಿರುದ್ಧವಲ್ಲ’ ಎಂದು ಹೇಳಿದ್ದಾರೆ.
‘ಶುಭಂ ಶೆಳಕೆ ಸಾಮಾಜಿಕ ಕಿಡಿ ಇದ್ದಂತೆ. ಅವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂಥ ಹೇಳಿಕೆ ನೀಡುವ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸುವ ಕೆಲಸ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.
‘ಯಾವುದೋ ಮೂಲೆಯಲ್ಲಿ ಕುಳಿತು ನಾರಾಯಣಗೌಡ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಾಲದು. ನಿಜವಾಗಿ ತಾಕತ್ತಿದ್ದರೆ ಬೆಳಗಾವಿಗೆ ಬನ್ನಿ’ ಎಂದು ಸವಾಲು ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.