ADVERTISEMENT

ಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 15:53 IST
Last Updated 10 ಡಿಸೆಂಬರ್ 2020, 15:53 IST

ಬೆಳಗಾವಿ: ನಗರದ ಅಂಗಡಿ–ಮುಂಗಟ್ಟುಗಳ ನಾಮಪಲಕಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎನ್ನುವ ನಿಯಮ ವಿರೋಧಿಸಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಮುಖಂಡರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಅಂಗಡಿಗಳು ಹಾಗೂ ಮಳಿಗೆಗಳಲ್ಲಿನ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ನಗರಪಾಲಿಕೆಯಿಂದ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗುತ್ತಿದೆ. ಇದನ್ನು ಖಂಡಿಸಿ ಹಾಗೂ ನೋಟಿಸ್ ಜಾರಿಗೊಳಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಮುಖಂಡ ಶುಭಂ ಶೇಳಕೆ ನೇತೃತ್ವದಲ್ಲಿ ಮನವಿ ಮಾಡಿದ್ದಾರೆ.

‘ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೇ ಪಲಕಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿಲ್ಲ. ಹೀಗಿರುವಾಗ ಗಡಿ ನಾಡು ಬೆಳಗಾವಿಯಲ್ಲಿ ಕಡ್ಡಾಯಗೊಳಿಸುವುದು ಸರಿಯಲ್ಲ. ಸರ್ಕಾರ ಇಂತಹ ನಿರ್ಧಾರಗಳನ್ನು ಹಿಂತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.