ADVERTISEMENT

ಬೆಳಗಾವಿ: ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಎಂಇಎಸ್‌ನಿಂದ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 15:05 IST
Last Updated 1 ಜೂನ್ 2025, 15:05 IST
ಬೆಳಗಾವಿ ತಾಲ್ಲೂಕಿನ ಹಿಂಡಲಗಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ, ಗಡಿ ಚಳವಳಿ ಕಾಲಕ್ಕೆ ಸಂಭವಿಸಿದ ಹಿಂಸಾಚಾರದಲ್ಲಿ, ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಮೃತಪಟ್ಟ 9 ಮಂದಿಗೆ ಎಂಇಎಸ್‌ ಮುಖಂಡರು ಶ್ರದ್ಧಾಂಜಲಿ ಅರ್ಪಿಸಿದರು
ಬೆಳಗಾವಿ ತಾಲ್ಲೂಕಿನ ಹಿಂಡಲಗಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ, ಗಡಿ ಚಳವಳಿ ಕಾಲಕ್ಕೆ ಸಂಭವಿಸಿದ ಹಿಂಸಾಚಾರದಲ್ಲಿ, ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಮೃತಪಟ್ಟ 9 ಮಂದಿಗೆ ಎಂಇಎಸ್‌ ಮುಖಂಡರು ಶ್ರದ್ಧಾಂಜಲಿ ಅರ್ಪಿಸಿದರು   

ಬೆಳಗಾವಿ: 1986ರ ಜೂನ್‌ 1ರಂದು ಮಹಾರಾಷ್ಟ್ರದ ನಾಯಕರು ಆರಂಭಿಸಿದ  ಗಡಿ ಚಳವಳಿ ಕಾಲಕ್ಕೆ ಸಂಭವಿಸಿದ ಹಿಂಸಾಚಾರದಲ್ಲಿ, ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಮೃತಪಟ್ಟ 9 ಮಂದಿಗೆ ತಾಲ್ಲೂಕಿನ ಹಿಂಡಲಗಾದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ವತಿಯಿಂದ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

‘ಸುಪ್ರೀಂ ಕೋರ್ಟ್‌ನಲ್ಲಿ ಇರುವ ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದವನ್ನು ಬೇಗ ಇತ್ಯರ್ಥಪಡಿಸಲು ಮಹಾರಾಷ್ಟ್ರ ಸರ್ಕಾರ ಕ್ರಮ ವಹಿಸಬೇಕು. ಗಡಿಯಲ್ಲಿ ಮರಾಠಿಗರ ಮೇಲೆ ಆಗುತ್ತಿರುವ ಅನ್ಯಾಯ ತಡೆಯಬೇಕು’ ಎಂದು ಕಾರ್ಯಕರ್ತರು ಆಗ್ರಹಿಸಿದರು.

ಮಾಜಿ ಶಾಸಕ ಮನೋಹರ ಕಿಣೇಕರ, ‘ಗಡಿಯಲ್ಲಿ ಮರಾಠಿಗರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ. ಗಡಿ ಸಮಸ್ಯೆ ಬಗೆಹರಿಸಲು ಕಳೆದ 10 ವರ್ಷಗಳಲ್ಲಿ ಒಮ್ಮೆಯೂ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿ ಕರೆದೊಯ್ದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಗಡಿಯಲ್ಲಿರುವ ಮರಾಠಿಗರನ್ನು ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷಿಸುತ್ತಿದೆ. ಹಾಗಾಗಿ ಮರಾಠಿ ಭಾಷಿಕ ಯುವಕರು ಬೀದಿಗೆ ಬಂದು, ನಮ್ಮ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು’ ಎಂದರು.

ಮುಖಂಡರಾದ ಮಾಲೋಜಿರಾವ್‌ ಅಷ್ಟೇಕರ, ಪ್ರಕಾಶ ಮರಗಾಳೆ, ಪ್ರಕಾಶ ಶಿರೋಳಕರ, ಶುಭಂ ಶೆಳಕೆ, ರೇಣು ಕಿಲ್ಲೇಕರ, ರಮಾಕಾಂತ ಕೊಂಡೂಸ್ಕರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.