
ಬೆಳಗಾವಿ: ಎಂಇಎಸ್ ಧೋರಣೆ ಖಂಡಿಸಿ, ಇಲ್ಲಿನ ವ್ಯಾಕ್ಸಿನ್ ಡಿಪೊ ಮೈದಾನದತ್ತ ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು.
ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.
ಮತ್ತೊಂದೆಡೆ, ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ವಾಜೀದ್ ಹಿರೇಕೋಡಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ನಗರದಲ್ಲಿ ಏಕಕಾಲಕ್ಕೆ ಕನ್ನಡ ಸಂಘಟನೆಯವರು ಮತ್ತು ಎಂಇಎಸ್ ನವರು ಬೇರೆ ಬೇರೆ ಸ್ಥಳಗಳಲ್ಲಿ ಪ್ರತಿಭಟಿಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.