ಶುಭಂ ಶೆಳಕೆ
ಬೆಳಗಾವಿ: ‘ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಹಳದಿ–ಕೆಂಪು ಬಣ್ಣದ ಕ್ರಿಮಿ ಇದ್ದಂತೆ. ಇಲ್ಲಿಗೆ ಬಂದು ಸಾಂಕ್ರಾಮಿಕ ಕಾಯಿಲೆ ಹರಡುವ ಅವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮೂಲಕ ಚುಚ್ಚುಮದ್ದು ಕೊಡಬೇಕಿದೆ’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಶುಭಂ ಶೆಳಕೆ ಹೇಳಿದ್ದಾರೆ.
ಈ ಬಗ್ಗೆ ಸೋಮವಾರ ವಿಡಿಯೊ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, ‘ಕರ್ನಾಟಕ ರಾಜ್ಯೋತ್ಸವಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಭಾಷಾವಾರು ಪ್ರಾಂತ್ಯ ರಚಿಸುವಾಗ ಗಡಿಭಾಗದ ಮರಾಠಿ ಭಾಷಿಕರಿಗೆ ಅನ್ಯಾಯವಾಗಿದೆ ಎಂದು ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇವೆ. ಹೀಗಿರುವಾಗ ನಾರಾಯಣಗೌಡ ಬೆಳಗಾವಿಗೆ ಬಂದು, ಆಕ್ಷೇಪಾರ್ಹ ಹೇಳಿಕೆ ನೀಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದಿರುವುದು ಸರಿಯಲ್ಲ. ಅವರ ವಿರುದ್ಧ ಜಿಲ್ಲಾಡಳಿತ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.
‘ನವೆಂಬರ್ 1ರಂದು ಬೆಳಗಾವಿಯಲ್ಲಿ ನಾವು ಕರಾಳ ದಿನಾಚರಣೆ ಆಚರಿಸುತ್ತೇವೆ. ಅದನ್ನು ಯಾರಿಂದಲೂ ತಡೆಯಲಾಗದು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.