ಬೆಳಗಾವಿ: 'ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಫೇಕ್ ಎನ್ಕೌಂಟರ್ ಮಾಡುವ ವಿಚಾರ ಪೊಲೀಸರಿಗಿತ್ತು ಎನಿಸುತ್ತದೆ ಎಂದು ಹೇಳಿಕೆ ಕೊಟ್ಟಿರುವುದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಶೋಭೆ ತರುವುದಿಲ್ಲ' ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿಧಾನ ಪರಿಷತ್ತಿನಲ್ಲಿ ನಡೆದ ಈ ಘಟನೆ ಎಲ್ಲರೂ ತಲೆ ತಗ್ಗಿಸುವಂಥದ್ದು. ರವಿ ಅವರನ್ನು ಬಂಧಿಸಿದ ಪೊಲೀಸರು ಬೇರೆ ಬೇರೆ ಸ್ಥಳಕ್ಕೆ ಏಕೆ ಕರೆದೊಯ್ದರು ಎಂದು ವಿವರಣೆ ಕೊಟ್ಟಿದ್ದಾರೆ. ಅದರ ಬಗ್ಗೆ ಹೆಚ್ಚು ಪ್ರತಿಕ್ರಿಯಿಸಲಾರೆ' ಎಂದರು.
ಸಿ.ಟಿ.ರವಿ ಅವರ ಹಲ್ಲೆಗೆ ಯತ್ನಿಸಿದ ಲಕ್ಷ್ಮೀ ಹೆಬ್ಬಾಳಕರ ಬೆಂಬಲಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸದ ಕುರಿತ ಪ್ರಶ್ನೆಗೆ, 'ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಗೃಹ ಸಚಿವರು ಇದಕ್ಕೆ ಪ್ರತಿಕ್ರಿಯಿಸುತ್ತಾರೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.