ADVERTISEMENT

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಾರು ಅ‍ಪಘಾತ: ಒಬ್ಬನ ಬಂಧನ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 16:28 IST
Last Updated 16 ಏಪ್ರಿಲ್ 2025, 16:28 IST
ಲಕ್ಷ್ಮೀ ಹೆಬ್ಬಾಳಕರ
ಲಕ್ಷ್ಮೀ ಹೆಬ್ಬಾಳಕರ   

ಬೆಳಗಾವಿ: ‘ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಕಾರಿಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಚಾಲಕ ಮಧುಕರ ಕೊಂಡಿರಾಮ್ ಸೋಮವಂಶಿ (65) ಎಂಬುವರನ್ನು ಈಚೆಗೆ ಬಂಧಿಸಿದ್ದು, ಲಾರಿ ವಶಕ್ಕೆ ಪಡೆಯಲಾಗಿದೆ. ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಾಲ್ಲೂಕಿನ ತಕರಾರವಾಡಿ ಗ್ರಾಮದ ನಿವಾಸಿ ಮಧುಕರ ಕೊಂಡಿರಾಮ್ ಸೋಮವಂಶಿ ಅವರನ್ನು ವಿಚಾರಣೆ ಮಾಡಲಾಗಿದೆ. ಎಫ್‌ಎಸ್‌ಎಲ್ ತಂಡಗಳು ವಾಹನ ಪರಿಶೀಲಿಸಿದ್ದು, ಅಪಘಾತದ ಬಗ್ಗೆ ಸಾರಿಗೆ ಇಲಾಖೆಯೂ ವರದಿ ನೀಡಿದೆ’ ಎಂದು ಅವರು ತಿಳಿಸಿದರು.

ಜ.14ರಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು, ಚನ್ನಮ್ಮನ ಕಿತ್ತೂರು ಬಳಿ ಅಪಘಾಕ್ಕೆ ಒಳಗಾಗಿತ್ತು. ಪೊಲೀಸರು ‘ಹಿಟ್‌ ಅಂಡ್‌ ರನ್‌’ ಕೇಸ್‌ ದಾಖಲಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.