
ಬೆಳಗಾವಿ: ‘ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಅತ್ಯಂತ ಕಷ್ಟದಲ್ಲೂ ಸಾಧನೆ ಮಾಡಿ ಇಡೀ ರಾಷ್ಟ್ರಕ್ಕೆ ಅತ್ಯುತ್ತಮ ಸಂವಿಧಾನ ನೀಡಿ ದಾರಿದೀಪವಾದವರು. ಅವರು ನಮಗೆಲ್ಲ ಆದರ್ಶ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರ್ ಗ್ರಾಮದಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಅನಾವರಣಗೊಳಿಸಿ ಮಾತನಾಡಿದರು.
‘ಅಂಬೇಡ್ಕರ್ ಅವರು ಬದುಕಿದ್ದ ಸಂದರ್ಭದಲ್ಲಿ ಅಸ್ಪೃಷ್ಯತೆಯಂತಹ ಅನಿಷ್ಠ ಪದ್ಧತಿ ಜೀವಂತವಿತ್ತು. ಈಗಿನಂತೆ ಯಾವುದೇ ಸೌಲಭ್ಯಗಳಿರಲಿಲ್ಲ. ಆದರೆ ಕಷ್ಟಗಳನ್ನೆಲ್ಲ ಮೆಟ್ಟಿ ನಿಂತು ಬೆಳೆದರು. ಬಸವಣ್ಣ, ಅಂಬೇಡ್ಕರ್, ಶಿವಾಜಿ ಎಲ್ಲರೂ ಇಡೀ ವಿಶ್ವಕ್ಕೇ ಆದರ್ಶರಾಗಿ ಬಾಳಿದವರು. ಅಂಥವರ ಪುತ್ಥಳಿಗಳನ್ನು ಎಲ್ಲ ಕಡೆ ಸ್ಥಾಪಿಸುವ ಮೂಲಕ ಮುಂದಿನ ಪೀಳಿಗೆಗೆ ಅವರ ತತ್ವ, ಸಿದ್ಧಾಂತಗಳನ್ನು ಹಸ್ತಾಂತರಿಸುವ ಕೆಲಸ ಮಾಡುತ್ತಿದ್ದೇನೆ’ ಎಂದರು.
ಕಾಡಾ ಅಧ್ಯಕ್ಷ ಯುವರಾಜ ಕದಂ, ಬಾಳು ದೇಸೂರಕರ್, ಮಲ್ಲೇಶ್ ಚೌಗುಲೆ, ಮಹೇಶ ಕೋಲಕಾರ, ಗುಂಡು ತಳವಾರ, ಗಿರಿಯಪ್ಪ ಕೋಲಕಾರ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.