ADVERTISEMENT

ನಿಖರವಾಗಿ ಹಾಜರಾತಿ ದಾಖಲಿಸಲು ಸೂಚನೆ

ವಡಗಾವಿಗೆ ಶಾಲೆಗೆ ಭೇಟಿ ನೀಡಿದ ಶಿಕ್ಷಣ ನಾಗೇಶ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 17:03 IST
Last Updated 17 ಸೆಪ್ಟೆಂಬರ್ 2022, 17:03 IST
ಬೆಳಗಾವಿಯ ವಡಗಾವಿಯ ಕರ್ನಾಟಕ ಪಬ್ಲಿಕ್‌ ಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬೆಳಗಾವಿಯ ವಡಗಾವಿಯ ಕರ್ನಾಟಕ ಪಬ್ಲಿಕ್‌ ಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಬೆಳಗಾವಿ: ಇಲ್ಲಿನ ವಡಗಾವಿಯ ಕರ್ನಾಟಕ ಪಬ್ಲಿಕ್‌ ಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

‘ಕಲಿಕಾ ಚೇತರಿಕೆ’ ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಅವರು, ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ, ಶೇಂಗಾ ಚಕ್ಕೆ ಮತ್ತು ಬಾಳೆಹಣ್ಣು ಸೇವಿಸುತ್ತಿರುವವರ ಮಾಹಿತಿ ಪಡೆದುಕೊಂಡರು.

ವಿದ್ಯಾರ್ಥಿನಿಯೊಬ್ಬಳು ಶುಕ್ರವಾರ ತರಗತಿಗೆ ಹಾಜರಾಗಿರಲಿಲ್ಲ. ಆದರೆ, ಪುಸ್ತಕದಲ್ಲಿ ಹಾಜರಾತಿ ದಾಖಲಿಸಿರುವುದು ಸಚಿವರ ಗಮನಕ್ಕೆ ಬಂತು. ‘ನಿಖರವಾಗಿ ಹಾಜರಾತಿ ದಾಖಲಿಸಬೇಕು. ಇಂತಹ ತಪ್ಪುಗಳು ಮರುಕಳಿಸಬಾರದು’ ಎಂದು ಶಿಕ್ಷಕಿಗೆ ಸೂಚನೆ ನೀಡಿದರು.

ADVERTISEMENT

ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗೀಯ ಕಚೇರಿ ಅಪರ ಆಯುಕ್ತ ಎಸ್‌.ಎಸ್‌. ಬಿರಾದಾರ, ಡಿಡಿಪಿಐ ಬಸವರಾಜ ನಾಲತವಾಡ, ಬಿಇಒ ವೈ.ಜೆ.ಭಜಂತ್ರಿ ಇತರರಿದ್ದರು. ಬಳಿಕ, ಇದೇ ಶಾಲೆ ಆವರಣದಲ್ಲಿರುವ ಸರ್ಕಾರಿ ಪಿಯು ಕಾಲೇಜಿಗೆ ಸಚಿವರು ಭೇಟಿ ನೀಡಿ ಶೈಕ್ಷಣಿಕ ಚಟುವಟಿಕೆ ಪರಿಶೀಲಿಸಿದರು.

ತಾಲ್ಲೂಕಿನ ಭೂತರಾಮನಹಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಪರಿಣಾಮಕಾರಿಯಾಗಿ ಮಕ್ಕಳಿಗೆ ಶಿಕ್ಷಣ ನೀಡಲು ಶಿಕ್ಷಕರು ಕೈಗೊಂಡ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.