ADVERTISEMENT

ಸಪ್ತಪದಿ’ ಯೋಜನೆ ಪುನರಾರಂಭಕ್ಕೆ ಆದೇಶ: ಸಚಿವೆ ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 15:36 IST
Last Updated 13 ಏಪ್ರಿಲ್ 2022, 15:36 IST
ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ   

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ‘ಕೋವಿಡ್‌ ಸಾಂಕ್ರಾಮಿಕದ ಹಿನ್ನಲೆಯಲ್ಲಿ 2 ವರ್ಷಗಳಿಂದ ಸ್ಥಗಿತಗೊಂಡಿದ್ದ, ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಸಪ್ತಪದಿ’–ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪುನರಾರಂಭಗೊಳಿಸಲು ಆದೇಶ ಹೊರಡಿಸಲಾಗಿದೆ’ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈ ಬಗ್ಗೆ ಬುಧವಾರ ಪ್ರಕಟಣೆ ನೀಡಿರುವ ಅವರು, ‘ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಸರ್ಕಾರ ಈ ಯೋಜನೆ ಆರಂಭಿಸಿದೆ. ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಗಳೆ ಮಾಡುತ್ತವೆ’.

‘ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆ ಆಗಿರುವ ಹಿನ್ನಲೆಯಲ್ಲಿ ಮತ್ತೆ ಸಾಮೂಹಿಕ ವಿವಾಹ ಕಾರ್ಯಕ್ರಮ ಪ್ರಾರಂಭಿಸಲಾಗುತ್ತಿದೆ. ಏ. 28 ಮತ್ತು ಮೇ 11 ಹಾಗೂ 25ರಂದು ಆಯ್ದ ‘ಎ’ ದರ್ಜೆಯ ದೇವಸ್ಥಾನಗಳಲ್ಲಿ ಕೋವಿಡ್‌ ನಿಯಮಾವಳಿಗಳನ್ನು ಪಾಲಿಸುವ ಮೂಲಕ ನಡೆಸಲು ಅದೇಶಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.