ADVERTISEMENT

ದೇಶದ ಪ್ರಗತಿಗೆ ಪೂರಕ ಬಜೆಟ್: ಉಮೇಶ ಕತ್ತಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2022, 15:21 IST
Last Updated 1 ಫೆಬ್ರುವರಿ 2022, 15:21 IST
ಉಮೇಶ ಕತ್ತಿ
ಉಮೇಶ ಕತ್ತಿ   

ಹುಕ್ಕೇರಿ: ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯಕ್ಕೆ ಪೂರಕವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದಾರೆ’ ಎಂದು ಅರಣ್ಯ, ಆಹಾರ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.

‘ಮಹತ್ವದ ಯೋಜನೆಗಳತ್ತ ಗಮನಹರಿಸುವ ಮೂಲಕ ಹಳ್ಳಿಗಳ ಅಭಿವೃದ್ಧಿಯ ಜೊತೆಗೆ ದೇಶದ ಆರ್ಥಿಕ ಪ್ರಗತಿಗೆ ಇಂಬು ನೀಡುವ ಬಜೆಟ್ ಇದಾಗಿದೆ. ಇನ್ನೂ ವಿಶೇಷವಾಗಿ ರೈತರ ಅಭ್ಯುದಯಕ್ಕೆ ಆದ್ಯತೆ ನೀಡಲಾಗಿದೆ. ಸಹಕಾರಿ ಸಂಘಗಳ ಮೇಲಿನ ತೆರಿಗೆಯನ್ನು ಶೇ.12ರಿಂದ ಶೇ 7ಕ್ಕೆ ಇಳಿಸಲಾಗಿದೆ. ₹10 ಕೋಟಿ ಒಳಗಿನ ಆದಾಯದ ಸಹಕಾರಿ ಸಂಘಗಳ ತೆರಿಗೆ ರಿಟರ್ನ್ಸ್‌ ಹೊಸ ನೀತಿ ಅಳವಡಿಸಲಾಗಿದೆ. ಇದರ ಜೊತೆಗೆ ಸಹಜ ಕೃಷಿಗೆ ಒತ್ತು ನೀಡಲು, ದೇಶದಲ್ಲಿ ರಾಸಾಯನಿಕ ಮುಕ್ತ ಸಹಜ ಕೃಷಿಗೆ ವಿಶೇಷ ಸೌಕರ್ಯ ಒದಗಿಸಲು ತೀರ್ಮಾನಿಸಲಾಗಿದೆ’ ಎಂದಿದ್ದಾರೆ.

‘ಎಣ್ಣೆಕಾಳುಗಳ ದೇಶೀಯ ಉತ್ಪಾದನೆ ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ. ನೈಸರ್ಗಿಕ ಕೃಷಿಗೆ ಆದ್ಯತೆ ಕೊಡಲಾಗಿದೆ. ಕೀಟನಾಶಕ ಸಿಂಪಡಣೆಗೆ ಡ್ರೋನ್ ಬಳಕೆಗೆ ಅವಕಾಶ ನೀಡಿ, ಸಿರಿಧಾನ್ಯಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆ ಒದಗಿಸಲಾಗುತ್ತಿದೆ. ಸಿರಿಧಾನ್ಯಗಳ ವರ್ಷವಾಗಿ 2023 ಘೋಷಿಸಲು ತೀರ್ಮಾನಿಸಿರುವುದು ಪ್ರಗತಿಗೆ ಪೂರಕವಾಗಿದೆ. ಕೃಷಿಕರು, ಉದ್ಯಮಿದಾರರು, ಯುವಕರು ಹೀಗೆ ಎಲ್ಲ ವರ್ಗದವರ ಏಳಿಗೆಗೆ ಸಹಕಾರಿಯಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.