ADVERTISEMENT

ಬೊಮ್ಮಾಯಿ ನೇತೃತ್ವದಲ್ಲೆ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ: ಉಮೇಶ ಕತ್ತಿ

​ಪ್ರಜಾವಾಣಿ ವಾರ್ತೆ
Published 2 ಮೇ 2022, 14:08 IST
Last Updated 2 ಮೇ 2022, 14:08 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಸಂಕೇಶ್ವರ (ಬೆಳಗಾವಿ): ‘ಮುಂಬರುವ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೆ ಎದುರಿಸಲಾಗುವುದು’ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದರು.

ನಾಯಕತ್ವ ಬದಲಾವಣೆ ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೇಳಿಕೆ ಕುರಿತು ಇಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ, ಉತ್ತಮವಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಬದಲಾವಣೆ ವಿಷಯ ಸದ್ಯಕ್ಕೆ ಇಲ್ಲ’ ಎಂದರು.

‘ಸಂತೋಷ್‌ ಅವರ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ಅವರು ಸಂಘಟನೆಯ ದೃಷ್ಟಿಯಿಂದ ಹೇಳಿಕೆ ನೀಡಿರಬಹುದು. ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಹೇಳಿದರು.

ADVERTISEMENT

‘ಪಡಿತರ ಚೀಟಿದಾರರರಿಗೆ ಉತ್ತರ ಕರ್ನಾಟಕದಲ್ಲಿ ಅಕ್ಕಿಯೊಂದಿಗೆ ಜೋಳ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಅಕ್ಕಿ ಜೊತೆ ರಾಗಿ ವಿತರಣೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.