ಬೆಳಗಾವಿ: ಖಾನಾಪುರ ತಾಲ್ಲೂಕಿನ ಗೋಲ್ಯಾಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಸಾರು ಮೈಮೇಲೆ ಬಿದ್ದು ಸುಟ್ಟ ಗಾಯಗಳಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಶುಕ್ರವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅವರ ಪೋಷಕರಿಂದ ಮಾಹಿತಿ ಪಡೆದರು.
‘ಮಕ್ಕಳು ಸಂಪೂರ್ಣ ಗುಣಮುಖರಾಗುವರೆಗೆ ಚಿಕಿತ್ಸೆ ಮುಂದುವರಿಸಬೇಕು. ಇದಕ್ಕೆ ತಗಲುವ ವೆಚ್ಚ ಇಲಾಖೆಯಿಂದ ಪಾವತಿಸಲಾಗುವುದು’ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜ ವರವಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.