
ಬೆಳಗಾವಿ: ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬುಧವಾರ, ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಸಚಿವೆಯೊಂದಿಗೆ ಜಿಲ್ಲೆಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಮುಂದಿನ ಕಾರ್ಯಯೋಜನೆಗಳ ಬಗ್ಗೆ ಮಾರ್ಗದರ್ಶನ ಪಡೆದರು. ಇದೇ ಸಮಯದಲ್ಲಿ ಅವರನ್ನು ಸಚಿವರು ಸನ್ಮಾನಿಸಿ, ಅವರ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಕೋರಿದರು. ನಂತರ ಪ್ರಿಯಾಂಕಾ ಅವರು ಸಚಿವೆ ಕಾಲಿಗೆ ನಮಸ್ಕರಿಸಿದರು.
‘ಪ್ರಿಯಾಂಕಾ ಜಾರಕಿಹೊಳಿ ಅವರು ಅತಿ ಚಿಕ್ಕ ವಯಸ್ಸಿನಲ್ಲಿ ಸಂಸದೆಯಾಗುವ ಮೂಲಕ ಜಿಲ್ಲೆಯ ಹೆಸರನ್ನು ಕೇಂದ್ರದಲ್ಲೂ ಮಿಂಚುವಂತೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಗೆ ಒಳ್ಳೆಯ ಯಶಸ್ಸು ದೊರೆಯಲಿ’ ಎಂದು ಸಚಿವೆ ಲಕ್ಷ್ಮಿ ಹಾರೈಸಿದರು.
ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ, ರಾಹುಲ್ ಜಾರಕಿಹೊಳಿ, ಯುವರಾಜ ಕದಂ, ಮಲಗೌಡ ಪಾಟೀಲ, ಮನೋಹರ್ ಬೆಳಗಾಂವ್ಕರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.