ADVERTISEMENT

ರಾಯಣ್ಣ, ಶಿವಾಜಿ ಪ್ರತಿಮೆಗಳಿಗೆ ಅಗೌರವ ತೋರುವುದು ಖಂಡನೀಯ: ಅಶ್ವತ್ಥ ನಾರಾಯಣ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2021, 8:24 IST
Last Updated 18 ಡಿಸೆಂಬರ್ 2021, 8:24 IST
ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಡಾ.ಸಿ.ಎನ್. ಅಶ್ವತ್ಥ ನಾರಾಯಣ   

ಬೆಳಗಾವಿ: ಕನ್ನಡಿಗರು ಮತ್ತು ಮರಾಠಿ ಭಾಷಿಕರ ಸೌಹಾರ್ದ ಸಂಬಂಧಕ್ಕೆ ಹುಳಿ ಹಿಂಡುವ ಉದ್ದೇಶದಿಂದ ಕಿಡಿಗೇಡಿಗಳು ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಅಗೌರವ ತೋರಿಸಿರುವುದು ಖಂಡನೀಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ರಾಜ್ಯದಲ್ಲಿರುವ ಎಲ್ಲ ಭಾಷೆಗಳ ಜನರೂ ಸೌಹಾರ್ದದಿಂದ ಇದ್ದಾರೆ. ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಗಡಿ ಭಾಗವಾದ ಬೆಳಗಾವಿ ಜಿಲ್ಲೆ ಇದಕ್ಕೆ ಹೊರತೇನೂ ಆಗಿಲ್ಲ. ನಾವು ರಾಯಣ್ಣನನ್ನು ಗೌರವಿಸುವಂತೆಯೇ ಶಿವಾಜಿಯನ್ನೂ ಗೌರವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಪಟ್ಟಭದ್ರ ಹಿತಾಸಕ್ತಿಗಳು ಬೀದಿಗೆ ಇಳಿದಿದ್ದು, ಸರ್ಕಾರ ಇದನ್ನು ಸಹಿಸುವುದಿಲ್ಲ. ಇಂತಹ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ‌ ನೀಡಿದ್ದಾರೆ.

ADVERTISEMENT

ಜನತೆ ವಿಚಲಿತರಾಗದೆ ಎಂದಿನಂತೆ ಶಾಂತಿ ಮತ್ತು ಸೌಹಾರ್ದ ಕಾಪಾಡಿಕೊಳ್ಳಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.