ADVERTISEMENT

ಬೆಳಗಾವಿ | ಸೈಕಲ್‌ ಮೇಲೆ ತೆರಳಿ ಜನರ ಸಮಸ್ಯೆ ಆಲಿಸಿದ ಶಾಸಕ ಅಭಯ ಪಾಟೀಲ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2023, 11:43 IST
Last Updated 13 ನವೆಂಬರ್ 2023, 11:43 IST
<div class="paragraphs"><p>ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಿಗೆ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಸೋಮವಾರ ಸೈಕಲ್‌ ಮೇಲೆ ತೆರಳಿ ಜನರ ಸಮಸ್ಯೆ ಆಲಿಸಿದರು</p></div>

ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಿಗೆ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಸೋಮವಾರ ಸೈಕಲ್‌ ಮೇಲೆ ತೆರಳಿ ಜನರ ಸಮಸ್ಯೆ ಆಲಿಸಿದರು

   

ಬೆಳಗಾವಿ: ಇಲ್ಲಿನ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಿಗೆ ಸೋಮವಾರ ಸೈಕಲ್ ಮೇಲೆ ತೆರಳಿ ಜನರ ಕುಂದುಕೊರತೆ ಆಲಿಸಿದರು.

ರಾಣಿ ಚನ್ನಮ್ಮ ನಗರ, ಗುರುಪ್ರಸಾದ ಕಾಲೊನಿ ಮತ್ತಿತರ ಬಡಾವಣೆಗೆ ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು, ಜನರಿಗೆ ವಿವಿಧ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಪರಿಶೀಲಿಸಿದರು.

ADVERTISEMENT

‘ಕೊಳವೆಬಾವಿ ಕೊರೆಯಿಸಿ ನಮಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೇಕು. ಎಲ್ಲೆಂದರಲ್ಲಿ ಕಸ ಸುಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು’ ಎಂದು ನಿವಾಸಿಗಳು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಭಯ, ‘ನಿಮಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಕ್ರಮ ವಹಿಸುತ್ತೇವೆ. ಭೂವಿಜ್ಞಾನಿಗಳ ವರದಿ ಆಧರಿಸಿ ನೀರು ಲಭ್ಯವಿರುವ ಕಡೆ ಕೊಳವೆಬಾವಿ ಕೊರೆಯಿಸಲು ಸಹಕಾರ ನೀಡಿ’ ಎಂದು ಕೋರಿದರು.

‘ಸ್ಥಳ ಲಭ್ಯವಿರುವ ಓವರ್‌ಹೆಡ್‌ ಟ್ಯಾಂಕ್‌ಗಳನ್ನು ನಿರ್ಮಿಸಿ, ಜನರಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.