ADVERTISEMENT

ಬೆನಕೆ ಗುಣಮುಖ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 8:33 IST
Last Updated 2 ಆಗಸ್ಟ್ 2020, 8:33 IST

ಬೆಳಗಾವಿ: ಕೋವಿಡ್‌–19 ಸೋಂಕಿಗೆ ಒಳಗಾಗಿದ್ದ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಸಂಪೂರ್ಣ ಗುಣಮುಖರಾಗಿದ್ದ ಭಾನುವಾರ ಇಲ್ಲಿನ ಕೆಎಲ್‌ಇ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯಕೀಯ ತಂಡದವರ ಸಹಕಾರದಿಂದ ಗುಣಮುಖನಾಗಿದ್ದೇನೆ. ಏಳು ದಿನಗಳವರೆಗೆ ಮನೆಯಲ್ಲಿ ಪ್ರತ್ಯೇಕವಾಗಿ ಇರಲು ವೈದ್ಯರು ಸಲಹೆ ನೀಡಿದ್ದಾರೆ. ಅದನ್ನು ಪಾಲಿಸುವೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT