ADVERTISEMENT

ಬೆಳಗಾವಿ: ಅಂಜಲಿ ಹೋರಾಟಕ್ಕೆ ಸಿದ್ದರಾಮಯ್ಯ ಸಾಥ್

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2021, 4:17 IST
Last Updated 13 ಡಿಸೆಂಬರ್ 2021, 4:17 IST
ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡರು
ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡರು   

ಬೆಳಗಾವಿ: ತಾವು ಪ್ರತಿನಿಧಿಸುವ ಖಾನಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ.

ಅಂಜಲಿ ಅವರು ಭಾನುವಾರ ಖಾನಾಪುರದಿಂದ ಪಾದಯಾತ್ರೆ ಆರಂಭಿಸಿದ್ದರು. ಯಳ್ಳೂರಿನಲ್ಲಿ ತಂಗಿ ಬೆಳಿಗ್ಗೆ ಪಾದಯಾತ್ರೆ ಮುಂದುವರಿಸಿದ್ದರು. ಅಲಾರವಾಡ ಕ್ರಾಸ್ ಬಳಿಗೆ ಬಂದ ಅವರೊಂದಿಗೆ ಸಿದ್ದರಾಮಯ್ಯ ಹಾಗೂ ಶಾಸಕರೂ ಆಗಿರುವ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, 'ಖಾನಾಪುರ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ. ಬಹಳಷ್ಟು ಮಂದಿ ಮನೆ ಕಳೆದುಕೊಂಡಿದ್ದಾರೆ. ಆದರೆ, ಸರ್ಕಾರದ ನಿರ್ಲಕ್ಷ್ಯದ ಪರಿಣಾಮ ಅಲ್ಲಿನ ಶಾಸಕರು ಒಂದು ಮನೆಯನ್ನೂ ಕೊಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹೋರಾಟ ನಡೆಸುತ್ತಿದ್ದಾರೆ. ಇಂತಹ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಸೆಳೆಯಲಾಗುವುದು. ಕಲಾಪದಲ್ಲಿ ಚರ್ಚಿಸಲಾಗುವುದು' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.