ಬೆಳಗಾವಿ: ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಕೂಲಿ ಕಾರ್ಮಿಕರೊಂದಿಗೆ ಭತ್ತದ ಪೈರುಗಳನ್ನು ನಾಟಿ ಮಾಡಿ, ಸಮಯ ಕಳೆದಿದ್ದಾರೆ.
ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಲು ಗುರುವಾರ ಖಾನಾಪುರ ಪಟ್ಟಣದ ವಿವಿಧೆಡೆ ಸುತ್ತಾಡಿದ ಅವರು, ಹೊರವಲಯದ ಗದ್ದೆಯೊಂದರಲ್ಲಿ ನಡೆಯುತ್ತಿದ್ದ ನಾಟಿ ಕೆಲಸದಲ್ಲಿ ಕೆಲಕಾಲ ಭಾಗಿಯಾದರು. ಮಳೆ ಇದ್ದಿದ್ದರಿಂದ ರೇನ್‌ಕೋಟ್ ಧರಿಸಿದ್ದರು.
ಈ ಕುರಿತು ವಿಡಿಯೊ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಕೋವಿಡ್ ಹಾಗೂ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಆತ್ಮಸ್ಥೈರ್ಯ ತುಂಬುವುದು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ. ಅನ್ನದಾತ ಸುಖೀಭವ’ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.