ADVERTISEMENT

ಚಿಕ್ಕೋಡಿಯಲ್ಲಿ ಕೊರೊನಾ ಪರೀಕ್ಷಾ ಲ್ಯಾಬ್: ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 13:51 IST
Last Updated 2 ಜುಲೈ 2020, 13:51 IST
ಚಿಕ್ಕೋಡಿಯಲ್ಲಿ ಕೊರೊನಾ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸುವಂತೆ ಆಗ್ರಹಿಸಿ ಶಾಸಕ ಗಣೇಶ ಹುಕ್ಕೇರಿ ಗುರುವಾರ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಗುರುವಾರ ಮನವಿ ಸಲ್ಲಿಸಿದರು
ಚಿಕ್ಕೋಡಿಯಲ್ಲಿ ಕೊರೊನಾ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸುವಂತೆ ಆಗ್ರಹಿಸಿ ಶಾಸಕ ಗಣೇಶ ಹುಕ್ಕೇರಿ ಗುರುವಾರ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಗುರುವಾರ ಮನವಿ ಸಲ್ಲಿಸಿದರು   

ಬೆಳಗಾವಿ: ‘ಚಿಕ್ಕೋಡಿಯಲ್ಲಿ ಕೊರೊನಾ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಬೇಕು’ ಎಂದು ಆಗ್ರಹಿಸಿ ಚಿಕ್ಕೋಡಿ- ಸದಲಗಾ ಶಾಸಕ ಗಣೇಶ ಹುಕ್ಕೇರಿ ಗುರುವಾರ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.

‘ಚಿಕ್ಕೋಡಿಯು ಬೆಳಗಾವಿಯಿಂದ ಸಾಕಷ್ಟು ದೂರದಲ್ಲಿದೆ. ಅಥಣಿ ತಾಲ್ಲೂಕಿನಿಂದ ಬೆಳಗಾವಿಗೆ ಪರೀಕ್ಷೆಗಾಗಿ ಬರುವುದು ಕಷ್ಟವಾಗುತ್ತದೆ. ಚಿಕ್ಕೋಡಿ ತಾಲ್ಲೂಕು ಮಹಾರಾಷ್ಟ್ರ ಗಡಿಯಲ್ಲಿರುವುದರಿಂದ ಹೆಚ್ಚಿನ ಅಪಾಯದಲ್ಲಿದೆ. ಹೀಗಾಗಿ, ಪ್ರಯೋಗಾಲಯ ಅಗತ್ಯವಾಗಿದೆ’ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

‘ನನ್ನ ಮನವಿ ಪರಿಗಣಿಸಿ ಮೌಖಿಕ ಒಪ್ಪಿಗೆ ಸೂಚಿಸಿದ್ದಿರಿ. ಆದರೆ, ಕ್ರಮವಾಗಿಲ್ಲ. ಪರಿಸ್ಥಿತಿ ಕೈಮೀರುವ ಮುನ್ನ ತೀರ್ಮಾನ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ’ ಎಂದು ಗಣೇಶ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.