ADVERTISEMENT

ಶಿವಾಜಿ ಪ್ರತಿಮೆ ಪರಿಶೀಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 16:16 IST
Last Updated 3 ಜೂನ್ 2020, 16:16 IST
ಬೆಳಗಾವಿ ತಾಲ್ಲೂಕಿನ ಯಳ್ಳೂರು ಬಳಿಯ ರಾಜಹಂಸಗಢದಲ್ಲಿ ನಿರ್ಮಾಣವಾಗುತ್ತಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ವೀಕ್ಷಿಸಿದರು.
ಬೆಳಗಾವಿ ತಾಲ್ಲೂಕಿನ ಯಳ್ಳೂರು ಬಳಿಯ ರಾಜಹಂಸಗಢದಲ್ಲಿ ನಿರ್ಮಾಣವಾಗುತ್ತಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ವೀಕ್ಷಿಸಿದರು.   

ಬೆಳಗಾವಿ: ತಾಲ್ಲೂಕಿನ ಯಳ್ಳೂರು ಬಳಿಯ ರಾಜಹಂಸಗಢ ಕೋಟೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣದ ಕಾರ್ಯವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬುಧವಾರ ವೀಕ್ಷಿಸಿದರು.

ಹಲವು ವರ್ಷಗಳ ಬೇಡಿಕೆಯಾಗಿದ್ದ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣಕ್ಕೆ ಇತ್ತೀಚೆಗೆ ಲಕ್ಷ್ಮಿ ಅವರು ಚಾಲನೆ ನೀಡಿದ್ದರು. ಇದರ ನಿರ್ಮಾಣಕ್ಕಾಗಿ ಹಿಂದಿನ ಕಾಂಗ್ರೆಸ್‌ ಸರ್ಕಾರವು ₹ 50 ಲಕ್ಷ ಅನುದಾನ ನೀಡಿತ್ತು. ಕೋಟೆಯ ಸಮಗ್ರ ಅಭಿವೃದ್ಧಿಗಾಗಿ ಹಿಂದಿನ ಸಮ್ಮಿಶ್ರ ಸರ್ಕಾರವು ₹ 5 ಕೋಟಿ ನೀಡಿತ್ತು. ಈಗಿನ ಸರ್ಕಾರವು ₹ 3 ಕೋಟಿ ನೀಡಿದೆ. ಇವೆಲ್ಲ ಅನುದಾನದಿಂದ ರಾಜಹಂಸಗಢದ ಅಭಿವೃದ್ಧಿ ಕಾಮಗಾರಿ ಭರದಿಂದ ನಡೆಯುತ್ತಿದೆ.

ಕಾಮಗಾರಿಯನ್ನು ವೀಕ್ಷಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಕಾಮಗಾರಿ ಉತ್ತಮ ರೀತಿಯಲ್ಲಿ ನಡೆಯುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ADVERTISEMENT

ಮೃಣಾಲ ಹೆಬ್ಬಾಳಕರ, ಯುವರಾಜ ಕದಂ ಸೇರಿದಂತೆ ಹಲವಾರು ಜನರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.