ADVERTISEMENT

ಆಧುನಿಕ ತಂತ್ರಜ್ಞಾನ ಬಳಕೆ: ರೈತರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 7:04 IST
Last Updated 20 ಜುಲೈ 2021, 7:04 IST
ಬೆಳಗಾವಿಯಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿರುವ ‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಶಾಸಕ ಅಭಯ ಪಾಟೀಲ ಸೋಮವಾರ ಚಾಲನೆ ನೀಡಿದರು. ಇಲಾಖೆಯ ಅಧಿಕಾರಿಗಳು ಇದ್ದಾರೆ
ಬೆಳಗಾವಿಯಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿರುವ ‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಶಾಸಕ ಅಭಯ ಪಾಟೀಲ ಸೋಮವಾರ ಚಾಲನೆ ನೀಡಿದರು. ಇಲಾಖೆಯ ಅಧಿಕಾರಿಗಳು ಇದ್ದಾರೆ   

ಬೆಳಗಾವಿ: ‘ರೈತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಸಲಹೆ ನೀಡಿದರು.

ಮುಂಗಾರು ಹಂಗಾಮಿನ ಸಮಗ್ರ ಕೃಷಿ ಅಭಿಯಾನದಲ್ಲಿ ಕೃಷಿ ಹಾಗೂ ಸಂಬಂಧಿತ ಇಲಾಖೆಗಳು ಹಮ್ಮಿಕೊಂಡಿರುವ ‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಕೃಸಿ ಯೋಜನೆಗಳ ಬಗ್ಗೆ ರೈತರ ಮನೆ ಬಾಗಿಲಿಗೆ ಮಾಹಿತಿ ಒದಗಿಸುವ ಕೆಲಸವನ್ನು ಇಲಾಖೆಗಳು ಮಾಡುತ್ತಿವೆ. ರೈತರು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳಲು ಬೇಸಾಯದ ಖರ್ಚನ್ನು ಕಡಿಮೆ ಮಾಡಿಕೊಂಡು ಆಧುನಿಕ ತಂತ್ರಜ್ಞಾನಗಳನ್ನು ಉಪಯೋಗಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಪಿ.ಎಂ. ಕಿಸಾನ್‌ ಯೋಜನೆಯಲ್ಲಿ ಸರ್ಕಾರ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡುತ್ತಿದೆ. ಇದನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು’ ಎಂದರು.

ಬೆಳಗಾವಿ ವಿಭಾಗದ ಉಪ ಕೃಷಿ ನಿರ್ದೇಶಕ ಎಚ್.ಡಿ. ಕೋಳೆಕರ, ‘ರೈತರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿ ಆಧುನಿಕ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದುಕೊಂಡು ಉತ್ಪಾದಕತೆ ಹೆಚ್ಚಿಸಿಕೊಳ್ಳಬೇಕು. ಬೆಳೆಗಳಿಗೆ ಕೀಟ ಹಾಗೂ ರೋಗಗಳು ಬಂದರೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹತೋಟಿಗೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ಆರ್.ಬಿ. ನಾಯ್ಕರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ ಮಹೇಂದ್ರಕರ, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಾಂತ ಗಾವಿ, ಅಧಿಕಾರಿಗಳಾದ ವಜ್ರೇಶ್ವರಿ ಕುಲಕರ್ಣಿ, ಪಿ.ಎಸ್. ಪಾಂಡ್ರೆ, ಕೆ.ಎಸ್. ಕಬ್ಬೂರ, ಆರ್.ಎನ್. ಭಟ್ಟ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.