ADVERTISEMENT

ವಿಧಾನಪರಿಷತ್ ಚುನಾವಣೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಜೊತೆ ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 15:30 IST
Last Updated 26 ನವೆಂಬರ್ 2021, 15:30 IST
ಬೆಳಗಾವಿಯಲ್ಲಿ ವಿಧಾನಪರಿಷತ್‌ ಚುನಾವಣೆ ಬಗ್ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಹಾಂತೇಶ ಕವಟಗಿಮಠ ಮತ್ತು ಜಿಲ್ಲಾ ಘಟಕ ಅಧ್ಯಕ್ಷ ಸಂಜಯ ಪಾಟೀಲ ಚರ್ಚಿಸಿದರು
ಬೆಳಗಾವಿಯಲ್ಲಿ ವಿಧಾನಪರಿಷತ್‌ ಚುನಾವಣೆ ಬಗ್ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಹಾಂತೇಶ ಕವಟಗಿಮಠ ಮತ್ತು ಜಿಲ್ಲಾ ಘಟಕ ಅಧ್ಯಕ್ಷ ಸಂಜಯ ಪಾಟೀಲ ಚರ್ಚಿಸಿದರು   

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೆಸ್‌ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಚರ್ಚಿಸಿದರು.

‘3ನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಮಹಾಂತೇಶ ಅವರನ್ನು ಗೆಲ್ಲಿಸಲು ಬಿಜೆಪಿಯ ಎಲ್ಲ ಮುಖಂಡರೂ ಒಂದಾಗಿ ಶ್ರಮಿಸಬೇಕು. ಚುನಾವಣೆಯಲ್ಲಿ ಹೇಗಾದರೂ ಮಾಡಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಸೋಲಿಸಲೇಬೇಕು. ಇದಕ್ಕಾಗಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಬೇಕು’ ಎಂದು ಸಭೆಯಲ್ಲಿ ಮನವರಿಕೆ ಮಾಡಲಾಯಿತು.

ADVERTISEMENT

‘ಕವಟಗಿಮಠ ಅವರು ವಿಧಾನಪರಿಷತ್ ಸದಸ್ಯರಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ಆಯ್ಕೆಗೆ ಎಲ್ಲ ಕಾರ್ಯಕರ್ತರೂ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ನಿರ್ವಹಿಸಬೇಕು’ ಎಂಧು ಸೂಚಿಸಿದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.