ADVERTISEMENT

ಶ್ರಮಿಕ್ ಸಂಜೀವಿನಿ ಸಂಚಾರಿ ಕ್ಲಿನಿಕ್‌ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 14:48 IST
Last Updated 11 ಜನವರಿ 2022, 14:48 IST
ಬೆಳಗಾವಿಯಲ್ಲಿ ಕಾರ್ಮಿಕ ಇಲಾಖೆಯಿಂದ ರೂಪಿಸಿರುವ ‘ಶ್ರಮಿಕ ಸಂಜೀವಿನಿ’ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಶಾಸಕ ಅನಿಲ ಬೆನಕೆ ಮಂಗಳವಾರ ಚಾಲನೆ ನೀಡಿದರು
ಬೆಳಗಾವಿಯಲ್ಲಿ ಕಾರ್ಮಿಕ ಇಲಾಖೆಯಿಂದ ರೂಪಿಸಿರುವ ‘ಶ್ರಮಿಕ ಸಂಜೀವಿನಿ’ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಶಾಸಕ ಅನಿಲ ಬೆನಕೆ ಮಂಗಳವಾರ ಚಾಲನೆ ನೀಡಿದರು   

ಬೆಳಗಾವಿ: ‘ಕಾರ್ಮಿಕ ಇಲಾಖೆಯ ವತಿಯಿಂದ ಬೆಳಗಾವಿಯ ಕಟ್ಟಡ ಕಾರ್ಮಿಕರ ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆಗಾಗಿ ಸಂಚಾರಿ ಕ್ಲಿನಿಕ್‌ ಸೌಲ್ಯಭ್ಯ ಕಲ್ಪಿಸಲಾಗಿದ್ದು, ಅದನ್ನು ಬಳಸಿಕೊಳ್ಳಬೇಕು’ ಎಂದು ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ತಿಳಿಸಿದರು.

ನಗರದ ರಾಣಿ ಚನ್ನಮ್ಮ ವೃತ್ತದ ಬಳಿ ಕಾರ್ಮಿಕ ಇಲಾಖೆಯ ವತಿಯಿಂದ ‘ಶ್ರಮಿಕ್ ಸಂಜೀವಿನಿ’ ಹೆಸರಿನ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಕಾರ್ಮಿಕರ ತುರ್ತು ಹಾಗೂ ಇನ್ನಿತರ ಚಿಕಿತ್ಸೆಗೆ ಈ ಸೌಲಭ್ಯ ಕಲ್ಪಿಸಲಾಗಿದೆ. ಅವರ ಕಷ್ಟದ ಸಮಯದಲ್ಲಿ ನೆರವಾಗಲಿದೆ. ವಿಶೇಷ ಯೋಜನೆ ಇದಾಗಿದ್ದು, ಎಲ್ಲ ಸ್ಥಳೀಯ ಕಾರ್ಮಿಕರ ಅವಶ್ಯಕ ಚಿಕಿತ್ಸೆಗೆ ಬಳಸಬೇಕು’ ಎಂದರು.

ADVERTISEMENT

‘ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಮ್ಮ ಸುರಕ್ಷೆ ನಮ್ಮ ಕೈಯಲ್ಲೇ ಇದೆ. ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಲಾಕ್‌ಡೌನ್‌ಗೆ ಅವಕಾಶ ಕೊಡಬಾರದು’ ಎಂದು ಕೋರಿದರು.

ಕಾರ್ಮಿಕ ಇಲಾಖೆಯ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ, ಕಾರ್ಮಿಕ ಇಲಾಖೆ ಅಧಿಕಾರಿ ತರನ್ನುಂ ಬೆಂಗಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.