ADVERTISEMENT

ಬೆಳಗಾವಿ: ಹಿಂಡಲಗಾ ಕಾರಾಗೃಹದಲ್ಲಿ ಮೊಬೈಲ್ ಫೋನ್‌ ಪತ್ತೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 14:58 IST
Last Updated 19 ಫೆಬ್ರುವರಿ 2021, 14:58 IST
ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿ ಪೊಲೀಸರು ಪರಿಶೀಲನೆ ನಡೆಸಿ ಹೊರ ಬಂದ ಕ್ಷಣ
ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿ ಪೊಲೀಸರು ಪರಿಶೀಲನೆ ನಡೆಸಿ ಹೊರ ಬಂದ ಕ್ಷಣ   

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಪೊಲೀಸ್ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ತಲಾ ಇಬ್ಬರು ಡಿಸಿಪಿಗಳು, ಎಸಿಪಿಗಳು, ತಲಾ ಎಂಟು ಮಂದಿ ಇನ್‌ಸ್ಪಕ್ಟರ್ ಹಾಗೂ ಪಿಎಸ್‌ಐಗಳು ಮತ್ತು 55 ಸಿಬ್ಬಂದಿ ಒಳಗೊಂಡ ತಂಡ ವಿಶೇಷ ಪರಿಶೀಲನಾ ಕಾರ್ಯಾಚರಣೆ ಕೈಗೊಂಡಿತು. ಈ ವೇಳೆ ಮೊಬೈಲ್‌ ಫೋನ್‌ ದೊರೆತಿದೆ. ಆ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT