ADVERTISEMENT

ಎಸ್ಸೆಸ್ಸೆಲ್ಸಿ: 78,772 ವಿದ್ಯಾರ್ಥಿಗಳ‌ ನೋಂದಣಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 4:07 IST
Last Updated 31 ಮಾರ್ಚ್ 2023, 4:07 IST

ಬೆಳಗಾವಿ: ಜಿಲ್ಲೆಯಲ್ಲಿ ಮಾರ್ಚ್‌ 31ರಿಂದ ಏಪ್ರಿಲ್‌ 15ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, 78,772 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳ ನಡುವೆಯೂ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 120 ಕೇಂದ್ರಗಳಲ್ಲಿ 33,182 ವಿದ್ಯಾರ್ಥಿಗಳು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 151 ಕೇಂದ್ರಗಳಲ್ಲಿ 45,590 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈಗ ಕೊರೊನಾ ಹಾವಳಿ ತಗ್ಗಿದೆ. ಆದರೂ, ಕೊರೊನಾ ನಿಯಂತ್ರಣ ಮಾರ್ಗಸೂಚಿ ಅನ್ವಯ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರತಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT