ಬೆಳಗಾವಿ: ‘ಇಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ವಿಷಾದಕರ ಸಂಗತಿ. ಸಾಮಾಜಿಕ ಸ್ವಾಸ್ಥ್ಯ ಕದಡುವ ಇಂಥ ಘಟನೆ ದಿನೇ ದಿನೆ ಹೆಚ್ಚುತ್ತಿದ್ದು, ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿರುವುದು ಇದರಿಂದ ಸ್ಪಷ್ಟವಾಗುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಟೀಕಿಸಿದ್ದಾರೆ.
ಈ ಕುರಿತು ಸೋಮವಾರ ಪ್ರಕಟಣೆ ನೀಡಿದ ಅವರು, ‘ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದರೆ ಮತ್ತು ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಹಾಕಿದರೆ ಸಾಲದು. ಹೆಣ್ಣು ಮಕ್ಕಳನ್ನು ಕಾಮುಕರಿಂದ ರಕ್ಷಿಸುವ ಕೆಲಸವಾಗಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.
‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಕಿಡಿಗೇಡಿಗಳಿಗೆ ಪೊಲೀಸರು ಮತ್ತು ಕಾನೂನಿನ ಭಯವೇ ಇಲ್ಲದಂತಾಗಿದೆ’ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.