ADVERTISEMENT

ರೈಲು ನಿಲ್ದಾಣ ಅಭಿವೃದ್ಧಿ: ವರ್ಷಾಂತ್ಯಕ್ಕೆ ಕಾಮಗಾರಿ ಪೂರ್ಣ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 13:54 IST
Last Updated 12 ಜುಲೈ 2021, 13:54 IST
ಬೆಳಗಾವಿಯ ರೈಲು ನಿಲ್ದಾಣದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಯನ್ನು ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಸೋಮವಾರ ವೀಕ್ಷಿಸಿದರುಪ್ರಜಾವಾಣಿ ಚಿತ್ರ
ಬೆಳಗಾವಿಯ ರೈಲು ನಿಲ್ದಾಣದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಯನ್ನು ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಸೋಮವಾರ ವೀಕ್ಷಿಸಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಂಸದೆ ಮಂಗಲಾ ಸುರೇಶ ಅಂಗಡಿ ಸೋಮವಾರ ವೀಕ್ಷಿಸಿದರು.

‘ನಿಲ್ದಾಣದ ಸರ್ವಾಂಗೀಣ ಅಭಿವೃದ್ಧಿಗೆ ₹ 90 ಕೋಟಿ ದೊರೆತಿದೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು. ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ನಿಲ್ದಾಣವನ್ನು ಅತ್ಯಾಧುನಿಕವಾಗಿ ರೂಪಿಸುವ ಕನಸು ಕಂಡಿದ್ದರು. ಅದರಂತೆ ಉನ್ನತೀಕರಣಕ್ಕಾಗಿ ಅನುಮೋದನೆ ಸಿಗುವಂತೆ ಮಾಡಿದ್ದರು’ ಎಂದು ಹೇಳಿದರು.

‘ವರ್ಷಾಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ’ ಎಂದು ತಿಳಿಸಿದರು.

ADVERTISEMENT

ಮುಖ್ಯ ಪ್ರವೇಶ ದ್ವಾರ, 2ನೇ ಪ್ರವೇಶ ದ್ವಾರ, ಕೋಚಿಂಗ್ ಡಿಪೊ, ಪಾದಚಾರಿ ಮಾರ್ಗಗಳು ಮೊದಲಾದ ಕಾಮಗಾರಿಗಳನ್ನು ಪರಿಶೀಲಿಸಿದರು.

ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.