ADVERTISEMENT

ಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ನಿಧನ​

​ಪ್ರಜಾವಾಣಿ ವಾರ್ತೆ
Published 19 ಮೇ 2022, 12:28 IST
Last Updated 19 ಮೇ 2022, 12:28 IST
ಕ್ಯಾಪ್ಟನ್ ಚಲಪತಿ ಚೌದ್ರಿ
ಕ್ಯಾಪ್ಟನ್ ಚಲಪತಿ ಚೌದ್ರಿ   

ರಾಯಚೂರು: ಬಹುಭಾಷಾ ಸಿನಿಮಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ (67) ವಯೋಸಹಜ ಅನಾರೋಗ್ಯದಿಂದ ಬುಧವಾರ ತಡರಾತ್ರಿ ನಿಧನರಾದರು.

ನಗರದ ಕೆ.ಎಂ.ಕಾಲನಿಯಲ್ಲಿ ವಾಸವಿದ್ದ ಚಲಪತಿ ಚೌದ್ರಿ ಅವರನ್ನು ಅನಾರೋಗ್ಯ ಹಿನ್ನೆಲೆ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕನ್ನಡ, ಹಿಂದಿ, ತೆಲಗು ಸೇರಿದಂತೆ ವಿವಿಧ ಭಾಷೆಯ ಚಲನಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ADVERTISEMENT

ಮೃತರಿಗೆ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ.

ನಗರದ ಬಿಆರ್‌ಬಿ ವೃತ್ತದ ಪಕ್ಕದಲ್ಲಿರುವರುದ್ರಭೂಮಿಯಲ್ಲಿ ಗುರುವಾರ ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಸಂಬಂಧಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.