ಘಟಪ್ರಭಾ: ರಾಜಾಪೂರ ಗ್ರಾಮದ ಯುವಕ ಶಿವಾನಂದ ಬಸಪ್ಪಾ ಕಾಚಾಗೋಳ ಎಂಬಾತನ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜಾಪೂರ ಗ್ರಾಮದ ಜೋತೆಪ್ಪಾ ವಿಠ್ಠಲ ಮಗದುಮ್ (27), ಬೀರಪ್ಪಾ ನಿಂಗಪ್ಪಾ ಬಾನಸಿ (27), ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಬಂಧಿತರು. ಪ್ರೀತಿ ವಿಷಯಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಿಪಿಐ ಶ್ರೀಶೈಲ ಬ್ಯಾಕೂಡ, ಪಿಎಸ್‌ಐ ಆರ್.ಎಸ್.ಖೋತ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.