ADVERTISEMENT

ಮಗಳನ್ನು ಕೊಂದ ಅಪ್ಪನಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 4:15 IST
Last Updated 6 ಜುಲೈ 2022, 4:15 IST

ಚಿಕ್ಕೋಡಿ: ಮಗಳನ್ನು ಕೊಲೆ ಮಾಡಿದ ಅಪರಾಧಿಗೆಇಲ್ಲಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ₹ 10 ಸಾವಿರ ದಂಡ ವಿಧಿಸಿ ಸೋಮವಾರ ಆದೇಶ ನೀಡಿದೆ.ಅಥಣಿ ತಾಲ್ಲೂಕಿನ ಮಂಗಸೂಳಿ ಮಲ್ಲಾರವಾಡಿ ಗ್ರಾಮದ ಬಸವರಾಜ ಈರಪ್ಪ ಮಗದುಮ್ (25) ಶಿಕ್ಷೆಗೆ ಒಳಗಾದವರು.

ಪ್ರಕರಣದ ವಿವರ: ಆರೋಪಿ ಬಸವರಾಜ ಮಗದುಮ್ ಎಂಬಾತ, ಬಡತನದ ಕಾರಣದಿಂದ ತನ್ನ ಮಕ್ಕಳನ್ನು ಸಾಕಲು ಆಗುವುದಿಲ್ಲ. ಅವರಿಗೆ ವಿದ್ಯಾಭ್ಯಾಸ ಕೊಡಿಸಲು ಆಗುವುದಿಲ್ಲ ಎಂದು ತನ್ ಏಳು ವರ್ಷದ ಮಗಳೂ ಸಂಗೀತಾಳನ್ನು ಮಂಗಸೂಳಿ ಗ್ರಾಮದ ಅಪ್ಪಾಸಾಬ ಸುರೇಶ ಶಿಂಧೆ ಅವರ ಜಮೀನಿನಲ್ಲಿರುವ ಶೆಡ್ ನಲ್ಲಿ 2016ರ ಜೂನ್ 9 ರಂದು ಕತ್ತು ಹಿಸುಕಿ ಕೊಲೆ ಮಾಡಿದ್ದ.

ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಅಥಣಿಯ ಸಿಪಿಐ ಶೇಖರಪ್ಪ, ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಅವರು ಹಂತಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ವೈ.ಜಿ.ತುಂಗಳ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.