
ಪ್ರಜಾವಾಣಿ ವಾರ್ತೆ
ರಾಯಬಾಗ: ತಾಲ್ಲೂಕಿನ ಕುಡಚಿ ಪಟ್ಟಣದಲ್ಲಿ ಹಣಕಾಸಿನ ವಿಷಯವಾಗಿ ನಡೆದ ಗಲಾಟೆಯಲ್ಲಿ ಯಾಸೀನ್ ಜಾತಗಾರ (24) ಎಂಬ ಯುವಕನಿಗೆ ಚಾಕು ಇರಿದು ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿ ರೋಹಿತ್ ಜಾಧವ ಎಂಬಾತ ಶನಿವಾರ ಖುದ್ದು ಪೊಲೀಸರಿಗೆ ಶರಣಾಗಿದ್ದಾನೆ.
‘ಹಣಕಾಸಿನ ವಿಷಯವಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಆಗ ರೋಹಿತ್ ಜಾಧವ ಚಾಕುವಿನಿಂದ ಇರಿದು ಯಾಸಿನ್‌ನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಮೃತ ಯುವಕನ ಕುಟುಂಬಸ್ಥರು ಪ್ರಕರಣ ದಾಖಲಿಸಿ, ಇನ್ನಿಬ್ಬರ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.