ಬೆಳಗಾವಿ: ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ಯುವ ಸಾಹಿತ್ಯ ಸಿರಿ ರಾಷ್ಟ್ರೀಯ ಪ್ರಶಸ್ತಿಗೆ ಇಲ್ಲಿನ ಕವಿ ನದೀಮ್ ಸನದಿ ಆಯ್ಕೆಯಾಗಿದ್ದಾರೆ.
ಜೂನ್ 28, 29ರಂದು ರಾಯಚೂರಿನಲ್ಲಿ ನಡೆಯಲಿರುವ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೊಳಸಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿಯಿಂದ ಸಿವಿಲ್ ಎಂಜಿನಿಯರ್ ಆಗಿರುವ ನದೀಮ್, ‘ಹುಲಿಯ ನೆತ್ತಿಗೆ ನೆರಳು’ ಹಾಗೂ ‘ಪ್ರತಿರೋಧ ಮತ್ತು ಪ್ರಿಯತಮೆ’ ಎಂಬ ಎರಡು ಕವನ ಸಂಕಲನ ಪ್ರಕಟಿಸಿದ್ದಾರೆ. ಇವೆರಡೂ ಕೃತಿಗಳಿಗೆ ರಾಜ್ಯಮಟ್ಟದ ಅನೇಕ ಪ್ರಶಸ್ತಿ ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.