ADVERTISEMENT

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಪ್ರಭಾರಿ ಕುಲಪತಿಯಾಗಿ ನಾಗಣ್ಣವರ ನೇಮಕ

​ಪ್ರಜಾವಾಣಿ ವಾರ್ತೆ
Published 5 ಜುಲೈ 2023, 6:30 IST
Last Updated 5 ಜುಲೈ 2023, 6:30 IST
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯಾಗಿ ಪ್ರೊ.ವಿ.ಎಫ್. ನಾಗಣ್ಣವರ ಮಂಗಳವಾರ ಅಧಿಕಾರ ವಹಿಸಿಕೊಂಡರು
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯಾಗಿ ಪ್ರೊ.ವಿ.ಎಫ್. ನಾಗಣ್ಣವರ ಮಂಗಳವಾರ ಅಧಿಕಾರ ವಹಿಸಿಕೊಂಡರು   

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಪ್ರಭಾರಿ ಕುಲಪತಿಯಾಗಿ ಪ್ರೊ.ವಿ.ಎಫ್. ನಾಗಣ್ಣವರ ಅವರನ್ನು ರಾಜ್ಯಪಾಲರು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ.

ಸದರಿ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ), ಕುಲಸಚಿವರು (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ್ ಪರಿಷತ್ ಸದಸ್ಯರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಸ್ವಾಗತ ಮಾಡಿಕೊಂಡರು ಎಂದು ಕುಲಸಚಿವರಾದ ರಾಜಶ್ರೀ ಜೈನಾಪೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT