ADVERTISEMENT

ನಾಗರಮುನ್ನೋಳಿ: ಕೊರೊನಾ ಯೋಧರಿಗೆ ಸತ್ಕಾರ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 13:59 IST
Last Updated 4 ಜುಲೈ 2021, 13:59 IST
ನಾಗರಮುನ್ನೋಳ್ಳಿ ಗ್ರಾಮದಲ್ಲಿ ಕೊರೊನಾ ಯೋಧರನ್ನು ಕಾಂಗ್ರೆಸ್ ಪಕ್ಷದಿಂದ ಸತ್ಕರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮತ್ತು ಮುಖಂಡರು ಇದ್ದಾರೆ
ನಾಗರಮುನ್ನೋಳ್ಳಿ ಗ್ರಾಮದಲ್ಲಿ ಕೊರೊನಾ ಯೋಧರನ್ನು ಕಾಂಗ್ರೆಸ್ ಪಕ್ಷದಿಂದ ಸತ್ಕರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮತ್ತು ಮುಖಂಡರು ಇದ್ದಾರೆ   

ನಾಗರಮುನ್ನೋಳಿ (ಬೆಳಗಾವಿ ಜಿಲ್ಲೆ): ‘ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕಾಗಿ ಹೋರಾಡುತ್ತಿರುವ ಕೊರೊನಾ ಯೋಧರ ಸೇವೆ ಅಮೋಘವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಗ್ರಾಮದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊರೊನಾ ಯೋಧರನ್ನು ಸತ್ಕರಿಸಿ ಹಾಗೂ ಗ್ರಾಮ ಪಂಚಾಯ್ತಿ ಪೌರಕಾರ್ಮಿಕರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

‘ಅಧಿಕಾರ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷ ಕೊರೊನಾ ಯೋಧರನ್ನು ಗೌರವಿಸುತ್ತಿದೆ. ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಾದ್ಯಂತ ಈ ಕೆಲಸ ಮಾಡಲಾಗುತ್ತಿದೆ. ಜನರು ಕಷ್ಟದಲ್ಲಿದ್ದಾಗ ಸಹಾಯ ಮಾಡುವುದು ನಡೆಯುತ್ತಿರಬೇಕು’ ಎಂದರು.

ADVERTISEMENT

ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಣ್ಮಣರಾವ ಚಿಂಗಳೆ, ಮುಖಂಡರಾದ ವೀರಕುಮಾರ ಪಾಟೀಲ, ಮಹಾವೀರ ಮೋಹಿತೆ, ಸಿದ್ದೋಜಿರಾವ ದೇಸಾಯಿ, ಯಲ್ಲಪ್ಪ ಶಿಂಗೆ, ಧನರಾಜ ಶೆಂಡೂರೆ, ರಾಜು ಕುಂಬಾರ, ಶಂಕರ ನೇರ್ಲಿ, ಶಿವಪುತ್ರ ಮನಗೂಳಿ, ಟಿ.ಎಸ್. ಮೋರೆ, ದುಳಗೌಡ ಪಾಟೀಲ, ವಿನಾಯಕ ಕುಂಬಾರ ಇದ್ದರು.

ಮುಖಂಡ ಸಿದ್ದಪ್ಪ ಮರ್ಯಾಯಿ ಸ್ವಾಗತಿಸಿದರು. ಅಶೋಕ ಮನಗೂಳಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.