
ಪ್ರಜಾವಾಣಿ ವಾರ್ತೆ
ಬೆಳಗಾವಿ: ‘ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ 10–15 ದಿನಗಳಲ್ಲಿ ಅಭ್ಯರ್ಥಿ ಘೋಷಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದರು.
ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಟಿಕೆಟ್ ಘೋಷಣೆ ವಿಚಾರದಲ್ಲಿ ಪಕ್ಷವು ಎಲ್ಲ ಬೆಳವಣಿಗೆಗಳನ್ನೂ ಗಮನಿಸಿ, ತೀರ್ಮಾನಿಸಲಿದೆ. ನಾಲ್ಕೈದು ಆಕಾಂಕ್ಷಿಗಳ ಹೆಸರಿವೆ’ ಎಂದು ಹೇಳಿದರು.
‘ಅಲ್ಲಿ ನಮ್ಮ ಕೆಲಸ ಆರಂಭವಾಗಿದ್ದು, ಸಂಘಟನಾತ್ಮಕ ಚಟುವಟಿಕೆಗಳು ನಡೆದಿವೆ. ಬಿಜೆಪಿಗೆ ಗೆಲುವಿನ ವಾತಾವರಣವಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.