ಬೆಳಗಾವಿ: ಧಾರವಾಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ನಾರಾಯಣ ಭರಮನಿ ಅವರನ್ನು ಬೆಳಗಾವಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ‘ಕೈ ಎತ್ತಿದ್ದರು’ ಎಂಬ ಕಾರಣಕ್ಕೆ ಬೇಸರಗೊಂಡಿದ್ದ ಭರಮನಿ ಸ್ವಯಂ ನಿವೃತ್ತಿಗೆ (ವಿಆರ್‌ಎಸ್) ಮುಂದಾಗಿದ್ದರು. ಅವರನ್ನು ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ.ಪರಮೇಶ್ವರ ಸಮಾಧಾನ ಮಾಡಲು ಯತ್ನಿಸಿದ್ದರು.
ನಡೆದಿದ್ದೇನು?: ಏಪ್ರಿಲ್ 28ರಂದು ಕೆಪಿಸಿಸಿ ವತಿಯಿಂದ ಬೆಳಗಾವಿಯಲ್ಲಿ ‘ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಆಂದೋಲನ’ ಆಯೋಜಿಸಲಾಗಿತ್ತು. ಬೆಳಗಾವಿ ನಗರ ಪೊಲೀಸ್ ಆಯಕ್ತರು ರಜೆ ಇದ್ದ ಕಾರಣ ಭರಮನಿ ಅವರಿಗೆ ಭದ್ರತೆಯ ಉಸ್ತುವಾರಿ ವಹಿಸಲಾಗಿತ್ತು.
ಸಿದ್ದರಾಮಯ್ಯ ಅವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತೆಯರು ಅಡ್ಡಿಪಡಿಸಿದ್ದರು.
ಕಪ್ಪು ಬಾವುಟ ಪ್ರದರ್ಶಿಸಿದ್ದರು. ಅವ್ಯವಸ್ಥೆ ಉಂಟಾದ ಕಾರಣ ಸಿದ್ದರಾಮಯ್ಯ ಅವರು ಭದ್ರತೆ ನಿಗಾ ವಹಿಸಿದ್ದ ಪೊಲೀಸರ ಮೇಲೆ ಸಿಟ್ಟಿಗೆದ್ದಿದ್ದರು. ಆಗ ಭರಮನಿ ಅವರು ವೇದಿಕೆ ಏರಿ ಬಂದಾಗ, ‘ಏನು ಮಾಡುತ್ತಿದ್ದೀರಿ ನೀವೆಲ್ಲ’ ಎಂದು ಕೈ ಎತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.