ADVERTISEMENT

ನಾರಾಯಣಗುರು ಜಯಂತಿ ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2021, 14:49 IST
Last Updated 23 ಆಗಸ್ಟ್ 2021, 14:49 IST
ಬೆಳಗಾವಿಯಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮತ್ತು ಮುಖಂಡರು ಫೋಟೊಗೆ ಸೋಮವಾರ ಪುಷ್ಪನಮನ ಸಲ್ಲಿಸಿದರು

ಬೆಳಗಾವಿ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ನಗರದ ಬಸವರಾಜ ಕಟ್ಟೀಮನಿ ಸಭಾಭವನದಲ್ಲಿ ಫೋಟೊಗೆ ಮಾಲಾರ್ಪಣೆ ಹಾಗೂ ಪೂಜಾ ಕಾರ್ಯಕ್ರಮದ ಮೂಲಕ ಸರಳವಾಗಿ ಸೋಮವಾರ ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಬಿಲ್ಲವರ ಸಂಘದ ಅಂಗ ಸಂಸ್ಥೆಯಾದ ಶಿವಗಿರಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸುಜನ್ ಕುಮಾರ, ಬಿಲ್ಲವರ ಸಂಘದ ಉಪಾಧ್ಯಕ್ಷ ಸುಂದರ ಕೋಟ್ಯಾನ, ಸಂತೋಷ್ ಪೂಜಾರಿ, ಚಂದ್ರಾ ಪೂಜಾರಿ, ಯಶೋಧರ ಕೋಟ್ಯಾನ್, ಅಶೋಕ ಪೂಜಾರಿ, ಮಂಜುನಾಥ ಪೂಜಾರಿ ಹಾಗೂ ಜಗದೀಶ್ ಐ.ಎಚ್. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT