ADVERTISEMENT

ಉದ್ಯೋಗ ಖಾತ್ರಿ ಕೆಲಸದಲ್ಲಿ ರಿಯಾಯಿತಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2025, 16:32 IST
Last Updated 18 ಏಪ್ರಿಲ್ 2025, 16:32 IST
ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ ವೀರಣ್ಣ ವಾಲಿ ಭೇಟಿ ನೀಡಿ, ಪರಿಶೀಲಿಸಿದರು
ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ ವೀರಣ್ಣ ವಾಲಿ ಭೇಟಿ ನೀಡಿ, ಪರಿಶೀಲಿಸಿದರು   

ಕಾಗವಾಡ: ‘ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ತಾಲ್ಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಕೆಲಸದಲ್ಲಿ ಶೇ 30ರಷ್ಟು ರಿಯಾಯಿತಿ ನೀಡಲಾಗಿದೆ. ಜೊತೆಗೆ ಕೆಲಸದ ಸ್ಥಳದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗಲು ವಾಹನದ ವ್ಯವಸ್ಥೆ ಮಾಡುವಂತೆ ಆಯಾ ಪಿಡಿಒಗಳಿಗೆ ಸೂಚಿಸಲಾಗಿದೆ‘ ಎಂದು ತಾ.ಪಂ. ಇಒ ವೀರಣ್ಣ ವಾಲಿ ಹೇಳಿದರು.

ಶುಕ್ರವಾರ ತಾಲ್ಲೂಕಿನ ಮಂಗಸೂಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ‘ಅಧಿಕಾರಿಗಳ ಸೂಚನೆಯ ಮೇರೆಗೆ ತಾಲ್ಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ಅವಧಿಯಲ್ಲಿ ಶೇ 30ರಷ್ಟು ಕಡಿತಗೊಳಿಸಲಾಗಿದೆ. ಬಿಸಿಲಿನ ತಾಪಕ್ಕ ಕೆಲಸದ ಅವಧಿಯನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಗಳ ವರಗೆ ಮಾಡಲಾಗಿದೆ‘ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಳು ಬಜಂತ್ರಿ, ಪಿಡಿಒ ಸಂಜಯ ಸೂರ್ಯವಂಶಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.