ADVERTISEMENT

ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸ್ಥಾನಕ್ಕೆ ಬಾಗವಾನ್ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 14:07 IST
Last Updated 28 ಜೂನ್ 2025, 14:07 IST
<div class="paragraphs"><p>ನಾಸೀರ್‌ ಬಾಗವಾನ್‌</p></div>

ನಾಸೀರ್‌ ಬಾಗವಾನ್‌

   

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ (ರಾಣಿ ಶುಗರ್) ಮಾಜಿ ಅಧ್ಯಕ್ಷ ನಾಸೀರ್ ಬಾಗವಾನ್ ಅವರು, ಶನಿವಾರ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ಅಂಗೀಕರಿಸುವಂತೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಕೋರಿದ್ದಾರೆ.

ADVERTISEMENT

‘ರಾಜಕೀಯ ಪಿತೂರಿಯಿಂದ ನನ್ನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ ನಂತರ ಆಡಳಿತ ಮಂಡಳಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಮೋಹನ ಹಿರೇಮಠ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಲು ಅರ್ಹರಾಗಿಲ್ಲ. ಕಾರ್ಮಿಕರಿಗೆ ಮೂರು ತಿಂಗಳ ವೇತನ ನೀಡುವುದು ಬಾಕಿ ಇದೆ. ಸರ್ಕಾರ ನಿಗದಿಪಡಿಸಿದ ಖೋಟಾಕ್ಕಿಂತ ಹೆಚ್ಚುವರಿ ಸಕ್ಕರೆ ಮಾರಾಟ ಮಾಡಲಾಗಿದೆ’ ಎಂಬ ಆರೋಪಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯದ ಆಡಳಿತ ಮಂಡಳಿ ಅವಧಿ ಅಕ್ಟೋಬರ್‌ವರೆಗೆ ಇದೆ ಎಂದು ಕಾರ್ಖಾನೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.