ADVERTISEMENT

ಬೆಳಗಾವಿ | ಅಥಣಿಯ ನದಿ ಇಂಗಳಗಾಂವ ಗ್ರಾಮ: ತಲೆ ಕೆಳಗಾಗಿ ಹಾರಿದ ರಾಷ್ಟ್ರಧ್ವಜ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 13:50 IST
Last Updated 15 ಆಗಸ್ಟ್ 2025, 13:50 IST
<div class="paragraphs"><p>ಅಥಣಿಯ ನದಿ ಇಂಗಳಗಾವ ಗ್ರಾಮದಲ್ಲಿ ಶುಕ್ರವಾರ ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಲಾಯಿಯತು</p></div>

ಅಥಣಿಯ ನದಿ ಇಂಗಳಗಾವ ಗ್ರಾಮದಲ್ಲಿ ಶುಕ್ರವಾರ ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಲಾಯಿಯತು

   

ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಲಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಗೀತಾ ಚನಗೌಡರ ಧ್ವಜಾರೋಹಣ ನೆರವೇರಿಸಿದರು. ಆದರೆ, ಬಾವುಟವನ್ನು ಕಟ್ಟುವ ವೇಳೆ ಸರಿಯಾದ ಕ್ರಮ ಪಾಲಿಸಿರದ ಕಾರಣ ಧ್ವಜ ಉಲ್ಟಾ ಹಾರಿತು.

ADVERTISEMENT

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.