ADVERTISEMENT

ನೂತನ ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರ ಸ್ವೀಕಾರ

ಅಧಿಕಾರ ಹಸ್ತಾಂತರಿಸಿದ ಸುಧೀರಕುಮಾರ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 14:28 IST
Last Updated 19 ಜುಲೈ 2019, 14:28 IST
ಬೆಳಗಾವಿಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ (ಎಡಕ್ಕೆ) ಅವರು ಶುಕ್ರವಾರ ಸುಧೀರಕುಮಾರ ರೆಡ್ಡಿ ಅವರಿಂದ ಅಧಿಕಾರ ಸ್ವೀಕರಿಸಿದರು
ಬೆಳಗಾವಿಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ (ಎಡಕ್ಕೆ) ಅವರು ಶುಕ್ರವಾರ ಸುಧೀರಕುಮಾರ ರೆಡ್ಡಿ ಅವರಿಂದ ಅಧಿಕಾರ ಸ್ವೀಕರಿಸಿದರು   

ಬೆಳಗಾವಿ: ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಹಿಂದಿನ ಎಸ್ಪಿ ಸುಧೀರಕುಮಾರ ರೆಡ್ಡಿ ಅಧಿಕಾರ ಹಸ್ತಾಂತರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ತರಿಸಿಕೊಂಡು ಅಧ್ಯಯನ ಮಾಡುತ್ತೇನೆ. ನನ್ನ ಅವಧಿಯಲ್ಲಿ ಕ್ರೈಂ ರೇಟ್‌ ಇಳಿಸಲು ಪ್ರಯತ್ನ ಮಾಡುತ್ತೇನೆ. ಎಲ್ಲ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುತ್ತೇನೆ’ ಎಂದು ತಿಳಿಸಿದರು.

ಪರಿಚಯ: ಹಿಂದೆಬಳ್ಳಾರಿಯ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮಣ ನಿಂಬರಗಿ ಅವರು2014ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದವರಾಗಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಎಂಜಿನಿಯರಿಂಗ್‌ (ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯೂನಿಕೇಶನ್‌) ಪದವಿ ಪಡೆದಿದ್ದಾರೆ.

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ ಪ್ರೊಬೆಷನರಿ ಎಸ್ಪಿ, ಚಿತ್ರದುರ್ಗದ ಹೆಚ್ಚುವರಿ ಎಸ್ಪಿ, ಉಡುಪಿ ಎಸ್ಪಿ, ಬೆಂಗಳೂರಿನಲ್ಲಿ ಎಸ್ಪಿ ವೈರಲೆಸ್‌ ಆಗಿ ಕಾರ್ಯನಿರ್ವಹಿಸಿದ್ದಾರೆ.

ರೆಡ್ಡಿಗೆ ಬೀಳ್ಕೊಡುಗೆ: ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿ, ವರ್ಗಾವಣೆಯಾದ ಸುಧೀರಕುಮಾರ ಅವರಿಗೆ ಕಚೇರಿಯ ಸಿಬ್ಬಂದಿ ಆತ್ಮೀಯ ಬೀಳ್ಕೊಡುಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.